Site icon PowerTV

ಪ್ರಧಾನಿ ಮೋದಿ ಓಡಾಡೋದು ಐಷಾರಾಮಿ ಫ್ಲೈಟ್​ನಲ್ಲಿ ಅಲ್ವಾ? ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಮೋದಿಯವರು ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ.? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗು ಬಾಣ ಬಿಟ್ಟಿದ್ದಾರೆ.

ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿಎಂ ಕಿಡಿಕಾರಿದ್ಧಾರೆ.

ಇದನ್ನೂ ಓದಿ: ನ್ಯೂಯರ್​ಗೆ ಗುಡ್ ನ್ಸೂಸ್​: LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ 

ಏನಿದು ಘಟನೆ..?: ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ವೀಡಿಯೋವೊಂದನ್ನು ಜಮೀರ್ ಅಹ್ಮದ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ವೀಡಿಯೋ ಶೇರ್ ಮಾಡಿಕೊಂಡು ಬಿಜೆಪಿ ನಾಯಕರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

 

Exit mobile version