Site icon PowerTV

ದೊಡ್ಡಬಳ್ಳಾಪುರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ!

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗಿದ್ದು ನಗರದ ಹೊರವಲಯದ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮೂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡಿದೆ. ಗ್ರಾಮದ ರಾಮಮೂರ್ತಿಯವರ ಮನೆಯ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಆವರಣದಲ್ಲಿದ್ದ ಕೋಳಿಗಳನ್ನು ತಿಂದು ಹೋಗಿದೆ. ಈ ರಾಮಮೂರ್ತಿ ಮನೆಯ ಸಿಸಿಟಿವಿಯಲ್ಲಿ ಚಿರತೆ ಓಡಾಟ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಪ್ರಕರಣ: ಸೂಕ್ತ ಕ್ರಮಕ್ಕೆ ಗೃಹಸಚಿವ ಪರಮೇಶ್ವರ್ ಸೂಚನೆ !

ಚಿರತೆ ಕಾಣಿಸಿಕೊಂಡ ಹಿನ್ನೆಲೆ ವೀರಾಪುರ ಗ್ರಾಮದ ಸುತ್ತಮುತ್ತ ಭಯದ ವಾತವರಣ ಸೃಷ್ಟಿಯಾಗಿದ್ದು ಜನರು ಆತಂಕಪಡುತ್ತಿದ್ದಾರೆ. ಚಿರತೆ ಸೆರೆ ಹಿಡಿಯಲು ವಲಯ ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Exit mobile version