Site icon PowerTV

ನ್ಯೂಯರ್​ಗೆ ಗುಡ್ ನ್ಸೂಸ್​: LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

ನವದೆಹಲಿ: ಕ್ರಿಸ್ಮಸ್‌ ಮತ್ತು ಹೊಸ ವರ್ಷಕ್ಕೆ ಮುನ್ನವೇ ಗ್ರಾಹಕರಿಗೆ ಗುಡ್ ನ್ಸೂಸ್ ಸಿಕ್ಕಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆಯಾಗಿದೆ.

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆ 39.50 ರೂ. ತೈಲ ಕಂಪನಿಗಳು ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50 ರೂ. ದರವಿದೆ. ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್‌ ಬೆಲೆ ಸಾಧಾರಣವಾಗಿ ಪರಿಷ್ಕರಣೆಗೊಳ್ಳುತ್ತವೆ.

ಇದನ್ನೂ ಓದಿ: ಸೇನಾ ಟ್ರಕ್​ ಮೇಲೆ ಉಗ್ರರ ಅಟ್ಟಹಾಸ: ಮುಂದುವರಿದ ಕಾರ್ಯಾಚರಣೆ!

ಪ್ರಸ್ತುತ ದಿನ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 905.50 ರೂ. ಇದೆ. ಉಜ್ವಲ ಯೋಜನೆ ಹೊಂದಿದ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಸಿಗುತ್ತಿದೆ. ಉಜ್ವಲ ಯೋಜನೆ ಅಡಿ ವರ್ಷಕ್ಕೆ ಒಟ್ಟು 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಹಣ ನೀಡಲಾಗುತ್ತದೆ.

Exit mobile version