Site icon PowerTV

ಪ್ರತಾಪ ಸಿಂಹ ಹೇಳಿಕೆ ದಾಖಲಿಸಲಾಗಿದೆ : ಪ್ರಲ್ಹಾದ್ ಜೋಶಿ

ನವದೆಹಲಿ : ಸಂಸತ್ ಭದ್ರತಾ ಲೋಪ ಪ್ರಕರಣ ಸಂಬಂಧ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 13ರ ಸಂಸತ್ ಭದ್ರತಾ ಲೋಪ ಸಂಬಂಧ ತನಿಖೆ ನಡೆಯುತ್ತಿದೆ. ವರದಿ ಸಲ್ಲಿಕೆ ಮಾಡಿದ ಬಳಿಕ ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ ಎಂದು ಜೋಶಿ ಹೇಳಿದ್ದಾರೆ.

ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಹಾರಿ, ಸ್ಟೋಕ್ ಕ್ಯಾನ್‌ಗಳನ್ನು ಹಾರಿಸಿದ್ದ ಆರೋಪಿಗಳು, ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದುಕೊಂಡಿದ್ದರು. ಈ ಪೈಕಿ ಓರ್ವ ಆರೋಪಿ ಮನೋರಂಜನ್ ಮೈಸೂರಿನವನಾಗಿದ್ದಾನೆ.

Exit mobile version