Site icon PowerTV

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಪ್ರಕರಣ: ಸೂಕ್ತ ಕ್ರಮಕ್ಕೆ ಗೃಹಸಚಿವ ಪರಮೇಶ್ವರ್ ಸೂಚನೆ !

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ಧಾರೆ.

ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಅಂದ್ರಹಳ್ಳಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿ ನಡೆಯಬಾರದು. ಜನರಲ್ ಸುತ್ತೋಲೆ ಹೊರಡಿಸಿ ಶಾಲೆಗಳಲ್ಲಿ ಈ ರೀತಿ ಘಟನೆ ನಡೆಯಬಾರದು. ಮಕ್ಕಳನ್ನ ಈ ರೀತಿಯ ಕೆಲಸಗಳಿಗೆ ಬಳಸಿಕೊಳ್ಳಬಾರದು. ಯಾವ ಉಪಾಧ್ಯಾಯರು ಮಕ್ಕಳ ಬಳಿ ಈ ಕೆಲಸ ಮಾಡಿಸಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಲು ನಾನು ಸೂಚಿಸುತ್ತೇನೆ ಎಂದರು.

ಇದನ್ನೂ ಓದಿ: ಅವ್ಯವಹಾರ ಆರೋಪ: ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು ಉತ್ತರ ತಾಲೂಕಿನ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ ಶಾಲಾ ಮಕ್ಕಳು ಆ್ಯಸಿಡ್ ಮತ್ತು ಬ್ಲೀಚಿಂಗ್ ಪೌಡರ್​ ಹಿಡಿದು ಶಾಲೆಯ ಶೌಚಾಲಯವನ್ನು ಸ್ವಚ್ಚಗೊಳಿಸುತ್ತಿದ್ದರು. ಈ ವಿಚಾರ ತಿಳಿದು ಪೋಷಕರು ಶಾಲೆ ಮುಂದೆ ಜಮಾಯಿತಿ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶಾಲಾ ಮಕ್ಕಳು ಶೌಚಾಲಯ ಸ್ವಚ್ಚಗೊಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರಿ ವಿರೋಧ ವ್ಯಕ್ತವಾಗಿತ್ತು.

ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸೇರಿ ಖಂಡಿಸಿ ಸೂಕ್ತ ಕ್ರಮಕೈಗೊಳ್ಳಲಾಗಿವುದು ಎಂದು ಅವರು ಹೇಳಿದರು.

Exit mobile version