Site icon PowerTV

ಪದ್ಮ ಪ್ರಶಸ್ತಿ ಹಿಂದಿರುಗಿಸುವುದಾಗಿ ಪ್ರಕಟಿಸಿದ ಕುಸ್ತಿ ಪಟು ಭಜರಂಗ್ ಪೂನಿಯಾ!

ನವದೆಹಲಿ: ಕುಸ್ತಿ ಫೆಡರೇಷನ್ ಆಫ್​ ಇಂಡಿಯಾದ ನೂತನ ಅಧ್ಯಕ್ಷರಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಂಜಯ್ ಸಿಂಗ್​ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟು ಭಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ, ಮತ್ತೊಬ್ಬ ಕುಸ್ತಿ ಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: WFI ಗೆ ನೂತನ ಅಧ್ಯಕ್ಷ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ!

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಬಜರಂಗ್ ಪೂನಿಯಾ ಅವರು, ಈ ಪತ್ರವನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿ, ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ ಎಂದು ತಿಳಿಸಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Exit mobile version