Site icon PowerTV

ಅಮೆರಿಕಾದಲ್ಲಿ ಹಿಂದೂ ದೇವಾಲಯ ಧ್ವಂಸ!

ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ.

ಹಿಂದೂ ಅಮೇರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ್ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ. ಘಟನೆ ಕುರಿತು ಪ್ರಕಿತ್ರಿಯೆ ನೀಡಿರುವ ಅಮೆರಿಕಾ, ಇದು ದ್ವೇಷದ ಅಪರಾಧ ಎಂದು ಪರಿಗಣಿಸಲಾಗಿದ್ದು, ಸಂಪೂರ್ಣ ತನಿಖೆ ನಡೆಸುವ ಭರವಸೆ ನೀಡಿದೆ.

ಇದನ್ನೂ ಓದಿ: ಇಂದು ವೀರಶೈವ ಲಿಂಗಾಯತ 24ನೇ ಮಹಾಧಿವೇಶನ!

ಈ ಹಿಂದೆ ಜನವರಿ 31 ರಂದು, ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವನ್ನು ಭಾರತ ವಿರೋಧಿ ಗೀಚುಬರಹದೊಂದಿಗೆ ಧ್ವಂಸಗೊಳಿಸಲಾಗಿತ್ತು. ಈ ಕೃತ್ಯಕ್ಕೆ ಭಾರತೀಯ ಸಮುದಾಯದಿಂದ ತೀವ್ ಆಕ್ರೋಶಗಳು ವ್ಯಕ್ತವಾಗಿತ್ತು.

Exit mobile version