Site icon PowerTV

ಮಂಡ್ಯದಿಂದಲೇ ಸ್ಪರ್ಧೆ, ಮಂಡ್ಯ ಬಿಟ್ಟು ಎಲ್ಲಿಯೂ ಹೋಗಲ್ಲ : ಸುಮಲತಾ

ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಖಚಿತ. ಈ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯವನ್ನೂ ತಿಳಿಸುತ್ತೇನೆ ಎಂದು ತಿಳಿಸಿದರು.

ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ, ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದೂ ಇಲ್ಲ ಎಂದು ಜಾಣ್ಮೆಯ ಉತ್ತರ ನೀಡಿದರು.

ಕಾಟೇರ ಬಗ್ಗೆ ಸುಮಲತಾ ಹೇಳಿದ್ದೇನು?

ಇದೇ ವೇಳೆ ನಟ ದರ್ಶನ್ ಅಭಿನಯದ ಕಾಟೇರ ಚಿತ್ರದ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಟೇರ ಚಿತ್ರವನ್ನು ನಾನು ಇನ್ನೂ ನೋಡಿಲ್ಲ. ಇಂದು ಮಂಡ್ಯದಲ್ಲಿ ಪ್ರೀ ರಿಲೀಸ್ ಇಂವೆಂಟ್ ಇದೆ. ರೈತರ ದಿನದಂದೇ ರೈತರ ಕುರಿತ ಹಾಡು ಬಿಡುಗಡೆಯಾಗುತ್ತಿದೆ. ರೈತರ ಕುರಿತ ಕಥಾಹಂದರ ಹೊಂದಿರುವ ಕಾಟೇರ ಬಗ್ಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದರು.

Exit mobile version