Site icon PowerTV

ಸಂಸದ ಪ್ರತಾಪ್ ಸಿಂಹ ಮತ್ತು ತಮ್ಮನ ವಿರುದ್ದ ಕಾಂಗ್ರೆಸ್ ಆರೋಪ!

ಮೈಸೂರು: ಸಂಸದ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಅಣ್ಣ ಪ್ರತಾಪ್ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ. ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮರಗಳ್ಳತನ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿದ್ದಾರೆ. ಇದು ದಕ್ಷ ಅಧಿಕಾರಿಯಾದ ತಹಶೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪಟ್ಟಿಗೆ ಮಣಿದ ಕೇಂದ್ರ ಸರ್ಕಾರ: WFI ಅಮಾನತುಗೊಳಿಸಿ ಆದೇಶ!

ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಕಾಂಗ್ರೆಸ್​​ ಕಿಡಿಕಾರಿದೆ.

Exit mobile version