Site icon PowerTV

ಯತ್ನಾಳ್​ ವಿರುದ್ಧ ಯಾವುದೇ ದೂರು ನೀಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ

ದಾವಣಗೆರೆ:ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಹೈಕಮಾಂಡ್‌ ಗೆ ದೂರು ನೀಡುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದರು. ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸುವುದು ನಮ್ಮ ಗುರಿಯಾಗಿದ್ದು, ಮುಂದಿನ ವಾರದಿಂದ ಇಬ್ಬರೂ ಪ್ರವಾಸ ಆರಂಭಿಸುತ್ತೇವೆ ಎಂದು ತಿಳಿಸಿದರು.

ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಯುವಕರು ಕುಣಿದು ಕುಪ್ಪಳಿಸುತ್ತಿದ್ದಾರೆ. ಅದು ಒಂದು ದೊಡ್ಡ ಶಕ್ತಿ ಎಂದರು.

ಇದನ್ನೂ ಓದಿ: ಮೈಸೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಹಿಂದೂ ಮುಸ್ಲಿಂ, ಕ್ರಿಶ್ಚಿಯನ್ನರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹತ್ತಾರು ಬಾರಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಜಾತಿಯ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಬಿಡಬೇಕು. ಇದರಿಂದ ಅವರಿಗೆ ಯಾವ ಲಾಭವೂ ಆಗುವುದಿಲ್ಲ ಎಂದು ಹೇಳಿದರು.

ಅಳೆದು ತೂಗಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ಯಾರ ಪರ, ವಿರೋಧವೂ ಇಲ್ಲ. ಪದಾಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಲಿ ಎಂದು ಹೇಳಿದರು.

 

Exit mobile version