Site icon PowerTV

ಯಾರಪ್ಪನ ದುಡ್ಡು ಮುಸ್ಲಿಮರಿಗೆ ನೀವು ಮೀಸಲಿಡಲು : ಕಲ್ಲಡ್ಕ ಪ್ರಭಾಕರ್ ಭಟ್

ಮಂಡ್ಯ : 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಹಿಂದೂಗಳು ಸರ್ಕಾರಕ್ಕೆ ತೆರಿಗೆ ಕಟ್ಟುವುದು ಎಂದು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗುಡುಗಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿರುವ ಅವರು, ಕ್ಯಾ. ಪ್ರಾಂಜಲ್ ಬಲಿದಾನಕ್ಕೆ ಕಾರಣರಾದವರು ಕಾಂಗ್ರೆಸ್. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಆ ವಿಷಬೀಜ ಬಿತ್ತಿ, ಬೆಳೆದವರು ಕಾಂಗ್ರೆಸ್ ಎಂದು ಕಿಡಿಕಾರಿದರು.

ಹನುಮ ನಮ್ಮ ಧರ್ಮ, ರಾಮ ನಮ್ಮ ಸಂಸ್ಕೃತಿ, ಧೈರ್ಯ, ಸಮರ್ಪಣೆ. ಶ್ರೀರಾಮ ಸರ್ವ ಶ್ರೇಷ್ಠ ವ್ಯಕ್ತಿ. ರಾಮನ ಹೃದಯದಲ್ಲಿ ಹನುಮಂತನಿದ್ದಾನೆ. ಪವಿತ್ರ ಅಯೋಧ್ಯೆಯಲ್ಲಿ ಮತ್ತೊಮ್ಮೆ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

ಅಲೆಕ್ಸಾಂಡರ್ ಗ್ರೇಟ್ ಅಂತಾರೆ

ನಮ್ಮ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಜಗತ್ತಿಗೆ ಎಲ್ಲಾ ಜನರಿಗೆ ಬದುಕು ಕೊಟ್ಟ ದೇಶ. ಜಗತ್ತಿಗೆ ನಾಗರಿಕತೆ ಹೇಳಿಕೊಟ್ಟದ್ದು ನಮ್ಮ ಜನ. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಹಿಂದೂ ಧರ್ಮದ ನಿದರ್ಶನಗಳಿವೆ. ಅಲೆಕ್ಸಾಂಡರ್ ದೇಶದ ಮೇಲೆ ಆಕ್ರಮಣ ಮಾಡಲು ಬಂದವನು. ನಾಚಿಕೆ ಇಲ್ಲದವರು ಅಲೆಕ್ಸಾಂಡರ್ ಗ್ರೇಟ್ ಅಂತಾರೆ. ಅಲೆಕ್ಸಾಂಡರ್ ಸೋಲಿಸಿದ ಪರಾಕ್ರಮಿಶಾಲಿ ದೇಶ ಭಾರತ ಎಂದು ತಿಳಿಸಿದರು.

Exit mobile version