Site icon PowerTV

ಅರವಿಂದ್ ಬೆಲ್ಲದ್ ವಿರೋಧ ಪಕ್ಷದ ಉಪ ನಾಯಕ, ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅರವಿಂದ್ ಬೆಲ್ಲದ್ ಅವರನ್ನು ವಿರೋಧ ಪಕ್ಷದ ಉಪ ನಾಯಕ ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ನೇಮಕ ಮಾಡಲಾಗಿದೆ.

ಅರವಿಂದ ಬೆಲ್ಲದ್ ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ನೇಮಕವಾಗಿದ್ದರೆ, ವಿಧಾನ ಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ವಿಧಾನ ಪರಿಷತ್​ ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಶಾಸಕ ಸುನೀಲ್ ಕುಮಾರ್ ಅವರನ್ನು ವಿಧಾನ ಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.

Exit mobile version