Saturday, August 23, 2025
Google search engine
HomeUncategorizedಹೊಸ ಕ್ರಿಮಿನಲ್ ಕಾನೂನು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಹೊಸ ಕ್ರಿಮಿನಲ್ ಕಾನೂನು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ : ಸಂಸತ್‌ನಲ್ಲಿ ಅಂಗೀಕಾರ ಪಡೆದಿರುವ ಕ್ರಿಮಿನಲ್‌ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆಯನ್ನು ತರುವ ಉದ್ದೇಶ ಹೊಂದಿರುವ ಮೂರು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ ಮಸೂದೆ(Bharatiya Nyaya Sanhita Bill), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ (Bharatiya Nagarik Suraksha Sanhita Bill) ಮತ್ತು ಭಾರತೀಯ ಸಾಕ್ಷ್ಯ ಮಸೂದೆ(Bharatiya Sakshya Bill)ಗಳಿಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಈ ಮಸೂದೆಗಳು ಕಾನೂನಾಗಿ ಪರಿವರ್ತನೆಗೊಂಡಿವೆ.

ಹೊಸ ಕ್ರಿಮಿನಲ್ ಕಾನೂನು ಮಸೂದೆಗಳ ವಿಚಾರವಾಗಿ ಇತ್ತೀಚೆಗೆ ಲೋಕಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ ಮಸೂದೆಗಳು ದೇಶದ ಜನರನ್ನು ವಸಾಹತು ಕಾಲದ ಮನಃಸ್ಥಿತಿಯಿಂದ ಮುಕ್ತಗೊಳಿಸಲಿವೆ ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments