Site icon PowerTV

ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಯುವತಿ!

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ.

ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ಕಳುಹಿಸಲಾಗಿದೆ. ಭರದ ಸಿದ್ಧತೆಯನ್ನೂ ನಡೆಸಲಾಗುತ್ತಿದೆ.

ಇದನ್ನೂ ಓದಿ: ತಮಿಳುನಾಡಲ್ಲಿ ಭಾರೀ ಮಳೆಯ ಎಚ್ಚರಿಕೆ!

ಇದರ ಬೆನ್ನಲ್ಲೇ, ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ ಯುವತಿ ಶಬನಮ್‌ ಶೇಖ್‌ ಅವರು ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ಮಾರ್ಗದ ಮಧ್ಯೆ ಶ್ರೀರಾಮನ ಭಕ್ತರನ್ನು ಭೇಟಿಯಾಗುತ್ತ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತ ಸಾಗುತ್ತಿರುವ ಇವರ ವಿಡಿಯೊಗಳು ಭಾರಿ ವೈರಲ್‌ ಆಗಿವೆ. ನಿತ್ಯವೂ ಪಾದಯಾತ್ರೆಯ ವಿಡಿಯೊಗಳನ್ನು ಶಬನಮ್‌ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Exit mobile version