Site icon PowerTV

PSI ಅಕ್ರಮ : ಕುಮಾರಸ್ವಾಮಿ, ಯತ್ನಾಳ್ ಸೇರಿ ಹಲವರಿಗೆ ಸಮನ್ಸ್ ಜಾರಿ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದ್ದು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಆಯೋಗವು ಮಾಜಿ ಸಿಎಂ, ಶಾಸಕರು ಹಾಗೂ ಮಾಜಿ ಶಾಸಕರಿಗೆ ಸಮನ್ಸ್ ಜಾರಿ ಮಾಡಿದೆ.

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ‌್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಉಪಮುಖ್ಯಮಂತ್ರಿ  ಡಾ.ಸಿ.ಎನ್. ಅಶ್ವತ್ಥ್ ನಾರಾಯಣರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ತಿಳಿಸಲಾಗಿದೆ.

ಕುಮಾರಸ್ವಾಮಿ, ಯತ್ನಾಳ್, ಧಡೇಸಗೂರು, ಅಶ್ವತ್ಥ್ ನಾರಾಯಣ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ, ಇವರನ್ನು ವಿಚಾರಣೆ ನಡೆಸಬೇಕು ಎಂದು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಾಳೆ‌ ಬೆಳಗ್ಗೆ 11 ಗಂಟೆಗೆ ಆಯೋಗದ ಮುಂದೆ‌ ಹಾಜರಾಗಲು ಸಮನ್ಸ್​ ಜಾರಿಗೊಳಿಸಲಾಗಿದೆ.

ಪಿಎಸ್‌ಐ ನೇಮಕಾತಿ ಅಕ್ರಮದ ಸತ್ಯಾಂಶ ತಿಳಿಯಲು ರಾಜ್ಯ ಸರ್ಕಾರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚನೆ ಮಾಡಿದೆ. ಈ ಆಯೋಗ ಪ್ರಕರಣದ ತನಿಖೆ ಚುರುಕುಗೊಳಿಸಿದೆ.

Exit mobile version