Site icon PowerTV

ಯತ್ನಾಳ್, ಹರಿಪ್ರಸಾದ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು : ಬಿ.ಸಿ. ಪಾಟೀಲ್

ಹಾವೇರಿ : ಸ್ವಪಕ್ಷಗಳ ವಿರುದ್ಧವೇ ಹೇಳಿಕೆ ಹರಿಬಿಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್​ ಅವರಿಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಟಕ್ಕರ್ ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿ.ಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುವುದು ಒಳ್ಳೆಯದು ಅಂತ ನನ್ನ ಭಾವನೆ ಎಂದು ಕುಟುಕಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ನಾನು ಬಸವನಗೌಡ ಪಾಟೀಲ್ ಅಂದರೆ ಬಿ.ಸಿ. ಪಾಟೀಲ್. ಏನು ಪಾಟೀಲ್ ಅವರೇ, ನೀವು ಈ ರೀತಿ ಹೇಳಿಕೆ ಕೊಡುವುದು ಸರಿನಾ? ನೀವು ಈ ರೀತಿ ಹೇಳಿಕೆ ಕೊಡುವುದು ನೋಡಿದರೆ ನೀವು ಬಿಜೆಪಿ ಪರವಾಗಿರುವಿರೋ? ಅಥವಾ ಕಾಂಗ್ರೆಸ್ ಪರವಾಗಿರುವಿರೋ? ಎನ್ನುವುದು ಅನುಮಾನ. ವಿಷಯ ತಿಳಿದುಕೊಂಡು ಮಾತನಾಡುವುದು ಬಹಳ ಒಳ್ಳೆಯದು ಎಂದು ಚಾಟಿ ಬೀಸಿದ್ದಾರೆ.

ಪಾಟೀಲ್​ಗೆ ಯತ್ನಾಳ್ ತಿರುಗೇಟು

ತಮ್ಮ​ ವಿರುದ್ಧ ವಾಗ್ದಾಳಿ ನಡೆಸಿರುವ ಬಿ.ಸಿ. ಪಾಟೀಲ್​ಗೆ ಶಾಸಕ ಯತ್ನಾಳ್ ತಿರುಗೇಟು ನೀಡಿದ್ದಾರೆ. ಬಿ.ಸಿ. ಪಾಟೀಲ್​ ಅವರೇ, ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಆಮೇಲೆ ಯೋಚಿಸಬಹುದು ಎಂದು ರೀ ಟ್ವೀಟ್ ಮಾಡಿದ್ದಾರೆ.

Exit mobile version