Site icon PowerTV

ಕಾಂಗ್ರೆಸ್​​​​ನ 5ನೇ ಗ್ಯಾರೆಂಟಿ ಯುವನಿಧಿ ಯೋಜನೆಗೆ ಇಂದು ಸಿಎಂ ಚಾಲನೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಂದ 5ನೇ ಯೋಜನೆ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಧಾನ ಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಡಿ. 26ರಿಂದ ನೋಂದಣಿಗೆ ಚಾಲನೆ ನೀಡಲಾಗುತ್ತಿದ್ದು, ಜ. 12ರಂದು ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಯೋಗಿ ಸಚಿವ‌ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಯುವತಿ!

ಕೌಶಲ್ಯಾಭವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆಯಾಗಿದೆ. ಯುವನಿಧಿ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಎಸ್.ಹೊರಟ್ಟಿ, ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ.

Exit mobile version