Site icon PowerTV

ದೆಹಲಿಗೆ ಜಾರಕಿಹೊಳಿ ದೌಡು, ಮೂರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ!

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನೀರಿಲ್ಲ, ಅನ್ನವಿಲ್ಲ ಶಬರಿಮಲೆಗೆ ಬರಬೇಡಿ: ಭಕ್ತರು ಆಕ್ರೋ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಚರ್ಚೆಗಳು ನಡೆಯುತ್ತಿದ್ದವು. ಈ ಬಗ್ಗೆ ಬಹಿರಂಗವಾಗಿಯೇ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಸಚಿವರು ಹೇಳಿಕೆಯನ್ನು ನೀಡಿದ್ದರು.

ಮೂವರು ಮುಖ್ಯಮಂತ್ರಿಗಳ ನೇಮಕ ವಿಚಾರ ಕಾಂಗ್ರೆಸ್‌ನಲ್ಲಿ ಒಳ ಬೇಗುದಿ ಹುಟ್ಟು ಹಾಕಿದ್ದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡದಂತೆ ತಾಕೀತು ಮಾಡಿತ್ತು.

Exit mobile version