Site icon PowerTV

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ; ಭವಿಷ್ಯ ನುಡಿದ ರಾಜಗುರು ದ್ವಾರಕನಾಥ್

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

 

 

 

Exit mobile version