Site icon PowerTV

ಹಿಂದೂ ಧರ್ಮ ಎಂಬುದು ಮೋಸ : ನಾಲಗೆ ಹರಿಬಿಟ್ಟ ಸ್ವಾಮಿ ಪ್ರಸಾದ್

ಬೆಂಗಳೂರು : ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.

‘ಹಿಂದೂ ಧರ್ಮ ಏಕ್ ಧೋಖಾ ಹೈ’ ಎಂದು ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದು, ಸುಪ್ರೀಂಕೋರ್ಟ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ಮೋದಿ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಹಿಂದೂ ಧರ್ಮ ಒಂದು ಧರ್ಮವಲ್ಲ. ಅದು ಕೇವಲ ಜೀವನ ವಿಧಾನ ಎಂದು ಎಸ್​ಪಿ ನಾಯಕ ಹೇಳಿದ್ದಾರೆ.

ಮೋಹನ್ ಭಾಗವತ್ ಕೂಡ ಒಂದಲ್ಲ ಎರಡೆರಡು ಬಾರಿ ಹಿಂದೂ ಎನ್ನುವುದು ಧರ್ಮವಲ್ಲ, ಜೀವನ ವಿಧಾನ ಎಂದು ಹೇಳಿದ್ದರು. ಪ್ರಧಾನಿ ಮೋದಿ ಕೂಡ ಹಿಂದೂ ಧರ್ಮ ಒಂದು ಧರ್ಮವಲ್ಲ ಎಂದು ಹೇಳಿದ್ದಾರೆ. ಅವರು ಇಂತಹ ಹೇಳಿಕೆ ನೀಡಿದಾಗ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ, ಸ್ವಾಮಿ ಪ್ರಸಾದ್ ಮೌರ್ಯ ಅದನ್ನು ಹೇಳಿದರೆ, ಅಶಾಂತಿಗೆ ಕಾರಣವಾಗುತ್ತದೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

1955ರ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ‘ಹಿಂದೂ ಒಂದು ಧರ್ಮವಲ್ಲ, ಬದಲಿಗೆ ಜೀವನ ವಿಧಾನ’ ಎಂದು ಹೇಳಲಾಗಿದೆ. ಅದು 200ಕ್ಕೂ ಹೆಚ್ಚು ಧರ್ಮಗಳ ಕಲೆಬೆರಕೆಯಾಗಿದೆ ಎಂದು ಮೌರ್ಯ ಹೇಳಿದ್ದಾರೆ.

Exit mobile version