Site icon PowerTV

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಚಿತ್ರದುರ್ಗ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ.

ಬೀರಾವರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮಧ್ಯಾಹ್ನ ಅನ್ನ ಸಾಂಬಾರ್ ಊಟ ಮಾಡಿದ್ದಾರೆ. ಬಿಸಿಯೂಟ ಸೇವಿಸಿದ ಬಳಿಕ ಒಬ್ಬೊಬ್ಬರಾಗಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಮಕ್ಕಳ ಮೂಗಿನಿಂದ ರಕ್ತ ಹೊರಬಂದಿದೆ. ನೋಡ ನೋಡುತ್ತಿದ್ದಂತೆ ಉಳಿದ ಶಾಲಾ ಮಕ್ಕಳಲ್ಲಿ ವಾಂತಿ, ಬೇಧಿಯಿಂದ ನರಳಾಟ ನಡೆಸಿದ್ದಾರೆ.

ಕೂಡಲೇ ಅಸ್ವಸ್ಥರಾದ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version