Site icon PowerTV

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ (Maharishi Valmiki Airport) ಹೆಸರು ಇಡಲಾಗಿದೆ.

ಇದೇ ಡಿಸೆಂಬರ್ 30ರಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಅಯೋಧ್ಯೆ ಧಾಮ್ ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಬರೋಬ್ಬರಿ 11,100 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು 6 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ.

ನಾಲ್ಕು ಹೊಸ ರಸ್ತೆಗಳನ್ನು ಲೋಕಾರ್ಪಣೆ

ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ವಾರಗಳ ಮೊದಲು, ಪ್ರಧಾನಿ ಮೋದಿ ಅವರು ದೇವಾಲಯದ ನಗರದಲ್ಲಿ ನಾಲ್ಕು ಹೊಸ ರಸ್ತೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಅಂದು ಬೆಳಗ್ಗೆ 11.15ಕ್ಕೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದು, ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

Exit mobile version