Site icon PowerTV

ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ ಯತ್ನಾಳ್: ಸಿದ್ದರಾಮಯ್ಯ

ಬೆಂಗಳೂರು: ‘ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣದ ದಾಖಲೆಗಳನ್ನು ವಿಚಾರಣಾ ಆಯೋಗದ ಮುಂದಿಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು,ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ನಾಮಫಲಕದಲ್ಲಿ ಕನ್ನಡ ಇರಲೇಬೇಕು: ಕನ್ನಡ ನಾಮಫಲಕ ಹಾಕಬೇಕೆಂದು ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧ ಇಲ್ಲ. ಆದರೆ, ಸಂಘಟನೆಗಳು ಶಾಂತಿಯುತ ಪ್ರತಿಭಟನೆ ಮಾಡಬೇಕು’ ಎಂದರು.

ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಬಲಿ ಪಡೆದ ಬಿಎಂಟಿಸಿ

‘ಕಾನೂನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ಭಾಷೆಗಳ ಬಗ್ಗೆ ವಿರೋಧ ಇಲ್ಲ. ಆದರೆ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡ ಇರಲೇಬೇಕು’ ಎಂದರು.

Exit mobile version