Site icon PowerTV

ನಾಳೆಯಿಂದ ಮಂಗಳೂರ –ಗೋವಾ ವಂದೇ ಭಾರತ್‌ ರೈಲು ಸಂಚಾರ: ಪ್ರಧಾನಿ ಮೋದಿಯಿಂದ ಚಾಲನೆ!

ಮಂಗಳೂರು ಹಾಗೂ ಗೋವಾದ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಡಿಸೆಂಬರ್ 30ರಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಭಾರತ್ ಎಕ್ಸ್​ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿದೆ. ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುರುಬ ಸಮುದಾಯಕ್ಕೆ ST ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಮಂಗಳೂರು‌ ಮಡಗಾಂವ್ ವಂದೇ ಭಾರತ್ ಎಕ್ಸ್​ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ.

Exit mobile version