Site icon PowerTV

ನೂತನ ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿದ ಸಚಿವ ಮುನಿಯಪ್ಪ!

ದೇವನಹಳ್ಳಿ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಇಂದು ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಚಾಲನೆ ನೀಡಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡುವ ಸಲುವಾಗಿ ಸಾರಿಗೆ ಇಲಾಖೆ BMTC ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ಒದಗಿಸುವುದಾಗಿ ಸಚಿವರು ಒಪ್ಪಿಗೆಯನ್ನು ನೀಡಿದರು.

ಇದನ್ನೂ ಓದಿ: ಭಾರತೀಯ ಸಮಾಜಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಚಿಕ್ಕಣ್ಣ

ಇದೇ ವೇಳೆ ದೇವನಹಳ್ಳಿ ತಾಲ್ಲೂಕಿನ ತೂಬಗೆರೆ ಪಂಚಾಯತಿಗೆ ಸಮರ್ಪಕ ಬಸ್ ಸೇವೆ ಇಲ್ಲದಿರುವುದರಿಂದ ಈ ಭಾಗಕ್ಕೆ ಬಸ್​ ಸಂಪರ್ಕ ಕಲ್ಪಿಸಲು ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಭಕ್ತಾದಿಗಳಿಗೆ ಹೆಚ್ಚಿನ ಸೌಕರ್ಯ ಹಾಗು ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿ ರಘುನಾಥ್, ಜಿಲ್ಲಾಧಿಕಾರಿ ಡಾ.ಶಿವಶಂಕರ್ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Exit mobile version