Site icon PowerTV

ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನ ಆಚರಣೆ!

ಬೆಂಗಳೂರು ಗ್ರಾ. ಜಿಲ್ಲೆ: ರಾಷ್ಟ್ರಕವಿ ಕುವೆಂಪು ಅವರ 119 ನೇ ಜನ್ಮದಿನವನ್ನು ಬೆಂಗಳೂರು ಜಿಲ್ಲಾಡಳಿತ ಭವನದಲ್ಲಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದೊಂದಿಗೆ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಇದನ್ನೂ ಓದಿ: ನೂತನ ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿದ ಸಚಿವ ಮುನಿಯಪ್ಪ!

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಈಶ್ವರ್ ಮಿರ್ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version