Site icon PowerTV

ಮುಸ್ಲಿಂ ಮಹಿಳೆಯರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಗೆ ಜಾಮೀನು ಮಂಜೂರು!

ಮಂಡ್ಯ: ಮುಸ್ಲಿಂ ಮಹಿಳೆಯ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಸಂಜೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಡಿಸೆಂಬರ್ 24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಜಯಂತಿ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ನಿಂದನಾತ್ಮಕ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪವನ್ನು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಮಾಡಲಾಗಿತ್ತು.

ಇದನ್ನೂ ಓದಿ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!

‘ಸಂಕೀರ್ತನಾ ಯಾತ್ರೆ’ಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಭಾಕರ್‌ ಭಟ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ.ಟಿ ಅವರು ವಿಚಾರಣೆ ನಡೆಸಿ ಮದ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

Exit mobile version