Site icon PowerTV

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಭಾಗಿ

ಬೆಂಗಳೂರು: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಅವರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನಿಂದ ಸೋನಿಯ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಅಧೀರ್‌ ರಂಜನ್‌ ಚೌಧರಿ ಅವರನ್ನು ಆಹ್ವಾನಿಸಿದ್ದಾರೆ. ಆಹ್ವಾನವು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಆಹ್ವಾನವು ಪ್ರಮುಖ ವಿಷಯವಾಗಿ ಮಾರ್ಪಟ್ಟಿತ್ತು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ₹5 ಸಾವಿರ ಹೆಚ್ಚಳ 

ರಾಮಮಂದಿರ  ಉದ್ಘಾಟನಾ ಕಾರ್ಯಕ್ರಮವು ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಉಂಟು ಮಾಡಿತ್ತು. ಮೈತ್ರಿಕೂಟದ ಕೆಲವು ಸದಸ್ಯರು ಕೈ ಪಕ್ಷಕ್ಕೆ ಭಾಗಿಯಾಗಿ ಎಂದು ಸಲಹೆ ನೀಡಿದರೆ, ಇನ್ನು ಹಲವರು ಭಾಗವಹಿಸುವುದು ಬೇಡ ಎಂದು ತಿಳಿಸಿದ್ದರು.

 

 

Exit mobile version