Site icon PowerTV

ಲಂಚಕ್ಕೆ ಬೇಡಿಕೆ : KSRTC ನಿಲ್ದಾಣಾಧಿಕಾರಿ ಶಿವಕುಮಾರ್ ಅಮಾನತು

ತುಮಕೂರು : ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ತುಮಕೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಾಧಿಕಾರಿ ಕೆ. ಶಿವಕುಮಾರ್ ಅವರನ್ನು ಅಮಾನತುಗೊಳಿಸಿ ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಕೆ. ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ದಾಣಾಧಿಕಾರಿಯಾಗಿದ್ದ ಶಿವಕುಮಾರ್ ವಿರುದ್ಧ ಹಲವು ಆರೋಪಗಳಿದ್ದವು. ಕೆಳ ಹಂತದ ಸಿಬ್ಬಂದಿಗೆ ಕಿರುಕುಳ, ಲಂಚಕ್ಕೆ ಬೇಡಿಕೆ ಸೇರಿದಂತೆ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಹಲವು ದೂರು, ಆರೋಪಗಳು ಕೇಳಿ ಬಂದಿದ್ದವು. ಆದರೆ, ಈವರೆಗೆ ಯಾವುದೇ ದೂರುಗಳು ದಾಖಲಾಗಿರಲಿಲ್ಲ.

ಆದರೆ, ಈ ಬಾರಿ ವಿಡಿಯೋ ರೆಕಾರ್ಡ್ ದಾಖಲೆ ಸಮೇತವಾಗಿ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಮಾನತು ಆದೇಶವಾಗಿದೆ ಎಂದು ತಿಳಿದು ಬಂದಿದೆ. ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಆಧರಿಸಿ ತುಮಕೂರು ನಿಲ್ದಾಣಾಧಿಕಾರಿ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

Exit mobile version