ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಮೂರು ಕುಟುಂಬಕ್ಕೆ KSRTC ಪರಿಹಾರ ನೀಡಿದೆ. ಮೂರು ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 1 ಕೋಟಿ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ ಅಡಿ ಪರಿಹಾರ ನೀಡಿದ್ದಾರೆ. ಚಾಲಕರಾದ ಬಿ.ಎಂ.ಪುಟ್ಟಸ್ವಾಮಿ, ಅಶೋಕ್ ಕುಮಾರ್ ಚಾಲಕ ಕಂ ನಿರ್ವಾಹಕ ರಮೇಶ ಜಿ. ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ, ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.

12 ಕುಟುಂಬಗಳಿಗೆ 1 ಕೋಟಿ ಪರಿಹಾರ
ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ. ಕಾರ್ಯಕ್ರಮದಲ್ಲಿ ಅನ್ಬುಕುಮಾರ್ ಸೇರಿ ಸಾರಿಗೆ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.



