Site icon PowerTV

ಕರಸೇವಕರ ಬಂಧನ ವಿಚಾರ, ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಗುಡಿಸಲಿಗೆ ಬೆಂಕಿ ಇಟ್ಟ ಸವರ್ಣೀಯರು!

ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಬಗ್ಗೆ ಮಾತನಾಡಿ ಅವರೊಂದಿಗೆ ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಷ್ಟದ ಕೆಲಸ ಎಂದರು.

ರಾಮಮಂದಿರ ಉದ್ಘಾಟನೆಗೆ ಕೇವಲ ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಮಂದಿರದ ಮುಖ್ಯ ಅರ್ಚಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರಿಗೆ ಆಹ್ವಾನ ಹೋಗಿದೆ , ಬಿಟ್ಟಿದೆ ಎಂದು ಗೊತ್ತಿಲ್ಲ ಆಹ್ವಾನ ಕೊಟ್ಟವರು ಹೋಗುತ್ತಾರೆ, ಇಲ್ಲದವರು ಇಲ್ಲ ಎಂದರು.

ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದರು.

Exit mobile version