Sunday, August 24, 2025
Google search engine
HomeUncategorizedಬಿಜೆಪಿಯವರದ್ದು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಬಿಜೆಪಿಯವರದ್ದು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಫೀಡರ್‌ ಸೌರೀಕರಣ ಯೋಜನೆ: ಜಾಗ ಗುರುತಿಸಿ, ಹಸ್ತಾಂತರಿಸಲು ಸಿಎಂ ಸೂಚನೆ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧಸಿ, ಹಿಂದಿನ ಪ್ರಕರಣಕ್ಕೆ ಈಗ ಜೀವನೀಡಿರುವ ಬಗ್ಗೆ ಬಿಜೆಪಿಯವರು ಇಂದು ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ. ಟೀಕೆಗಳಿಗೆ , ಅನುಮಾನಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು.

ಸಿಎಂ ನವದೆಹಲಿ ಪ್ರವಾಸ:

ಇಂದು ಮುಖ್ಯಮಂತ್ರಿಗಳ ನವದೆಹಲಿ ಪ್ರವಾಸದ ಉದ್ದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನವದೆಹಲಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಪ್ರಮುಖ ಸಭೆ ನಡೆಸುವ ಸಾಧ್ಯತೆಯಿರುವುದರಿಂದ ನವದೆಹಲಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments