Site icon PowerTV

ಅಯೋಧ್ಯೆಗೆ ಆಹ್ವಾನವಿದೆ, ನಾವು ಹೋಗಲ್ಲ : ಸಿದ್ಧಲಿಂಗ ಶ್ರೀ

ತುಮಕೂರು : ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ತುಮಕೂರಿನ ಶ್ರೀ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳಿಗೆ ಅಧಿಕೃತ ಆಹ್ವಾನ ಬಂದಿದೆ.

ಈ ಕುರಿತು ಮಾತನಾಡಿರುವ ಸಿದ್ಧಲಿಂಗ ಸ್ವಾಮೀಜಿ, ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನಮಗೂ ಆಹ್ವಾನವಿದೆ. ಆದರೆ, ನಾವು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಜನವರಿ 20ರಂದು ಅಯೋಧ್ಯೆ ತಲುಪಬೇಕು ಎಂದು ಮನವಿ ಮಾಡಿದ್ದಾರೆ. ಹಾಗೆಯೇ ಭದ್ರತೆಯ ದೃಷ್ಟಿಯಿಂದ ಜನವರಿ 23ರಂದೇ ಮರಳಬೇಕು ಎಂದು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಜನವರಿ 21ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ ಇರುವುದರಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಮೂಲಗಳ ಪ್ರಕಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಶೃಂಗೇರಿಯ ವಿಭುಶೇಖರ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ, ಪುತ್ತೂರು, ಅದಮಾರು, ಶ್ರವಣ ಬೆಳಗೋಳ, ಬೇಲಿಮಠ, ರಂಭಾ ಪುರಿ ಹೀಗೆ ಹಲವು ಮಠಗಳ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ.

Exit mobile version