Site icon PowerTV

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ: ಡಿ.ಕೆ ಶಿವಕುಮಾರ್​ 

ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ. ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಇದನ್ನೂ ಓದಿ: ಅಯೋಧ್ಯೆ ವಿಚಾರ: ಗೋದ್ರಾದಂತ ಹತ್ಯಾಕಾಂಡ ಸೃಷ್ಟಿಸಲು ಪ್ರಯತ್ನ:ಬಿ.ಕೆ ಹರಿಪ್ರಸಾದ್​

ನಾವು ಬಿಜೆಪಿಯವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ.ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು.

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿದ ಬಗ್ಗೆ ಮಾತನಾಡಿದ ಅವರು, ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ ಎಂದು ತಿರುಗೇಟು ನೀಡಿದರು.

 

 

 

 

 

Exit mobile version