Site icon PowerTV

ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ ಆಗುತ್ತದೆ : ಯತೀಂದ್ರ ವಿವಾದಾತ್ಮಕ ಹೇಳಿಕೆ

ದಾವಣಗೆರೆ : ಒಂದ್ಕಡೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್​ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ರೆ, ಇತ್ತ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರನೇ ಆಗುತ್ತದೆ ಎಂದು ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು. ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ ಎಂದು ಮಾಜಿ ಶಾಸಕ ಯತೀಂದ್ರ ವಿವಾದಿತ ಹೇಳಿಕೆ ಕೊಟ್ಟಿದ್ದಾರೆ.

ಗೋಧ್ರಾ ಹತ್ಯಾಕಾಂಡ ಮಾಡಿ ಅಧಿಕಾರಕ್ಕೆ ಬಂದ್ರು

ಬಿಜೆಪಿಯವರು ಚುನಾವಣೆ ಹತ್ತಿರ ಬಂದಾಗ ಏನಾದರೂ ಗಿಮಿಕ್ ಮಾಡ್ತಾರೆ. ಬಿಜೆಪಿಯವರು ಅಧಿಕಾರಕ್ಕಾಗಿ ಯಾವುದೇ ಕೆಳಮಟ್ಟಕ್ಕೆ ಇಳಿಯುವುದಕ್ಕೂ ರೆಡಿ. ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಪುಲ್ವಾಮ್ ಮಾಡಿದ್ರು, 2014ಕ್ಕೂ ಮುಂಚೆ ಗೋಧ್ರಾ ಹತ್ಯಾಕಾಂಡ ಮಾಡಿ ರಾಜಕೀಯ ಲಾಭ ಪಡೆದುಕೊಂಡು ಅಧಿಕಾರಕ್ಕೆ ಬಂದ್ರು ಎಂದು ಕುಟುಕಿದ್ದಾರೆ.

Exit mobile version