Site icon PowerTV

ಎಲ್ಗರ್ ಔಟಾದಾಗ ಸಂಭ್ರಮಿಸದಂತೆ ಮನವಿ; ಕೊಹ್ಲಿ ನಡೆಗೆ ಅಭಿಮಾನಿಗಳು ಫಿದಾ

ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನಡೆದುಕೊಂಡ ರೀತಿಯ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಆತಿಥೇಯ ತಂಡದ ನಾಯಕ ಡೀನ್ ಎಲ್ಗರ್ ಅವರ ಪಾಲಿಗೆ ಇದು ವೃತ್ತಿ ಜೀವನದ ಕೊನೇ ಟೆಸ್ಟ್ ಪಂದ್ಯವಾಗಿದೆ. ಮೊದಲ ಟೆಸ್ಟ್‌ನಲ್ಲಿ ಅಮೋಘ ಶತಕ ಬಾರಿಸಿ ತಂಡದ ಜಯಕ್ಕೆ ಕಾರಣರಾಗಿದ್ದ ಎಲ್ಲರ್, ಎರಡನೇ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ವೈಫಲ್ಯ ಅನುಭವಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್​​​​​​..? 

ಮೊದಲ ಇನಿಂಗ್ಸ್‌ನಲ್ಲಿ 4 ರನ್ ಗಳಿಸಿದ್ದ ಅವರು, ಎರಡನೇ ಇನಿಂಗ್ಸ್‌ನಲ್ಲಿ 12 ರನ್ ಗಳಿಸಿದ್ದಾಗ ಮುಕೇಶ್ ಕುಮಾರ್ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟಾದರು. ಈ ವೇಳೆ ಸಂಭ್ರಮ ಆಚರಿಸದಂತೆ ಸಹ ಆಟಗಾರರು ಮತ್ತು ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಮನವಿ ಮಾಡಿದ ಕೊಹ್ಲಿ, ಎಲ್ಗರ್​​​ಗೆ ತಲೆಬಾಗಿ ಗೌರವ ಸೂಚಿಸಿದರು. ಕೋಹ್ಲಿಯವರ ಈ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.

Exit mobile version