Site icon PowerTV

ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್​​​​​​..? 

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಕನ್ನಡ ಬಿಗ್​ಬಾಸ್-10 ಸ್ಪರ್ಧಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.  

ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ ಬುಧವಾರ ರಾತ್ರಿ ಮಾತ್ರೆಗಳನ್ನ ನುಂಗಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಬಿಗ್​​ಬಾಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ ತಪ್ಪಿದೆ.

ಡೋನ್ ಪ್ರತಾಪ್‌ಗೆ ಅನಾರೋಗ್ಯ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ವದಂತಿ ಹಬ್ಬಿದೆ.

ಆದರೀಗ ಪ್ರತಾಪ್ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ದಿನ ವಿಶ್ರಾಂತಿ ಪಡೆಯುವಂತೆಯೂ ಅವರಿಗೆ ವೈದ್ಯರು ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಗುಮಾನಿ ಹರಡಿದೆ. ಇದಕ್ಕೆ ಕೆಲವರು ಡೋನ್ ಪ್ರತಾಪ್‌ಗೆ ಆರೋಗ್ಯದಲ್ಲಿ ಏರುಪೇರಾಗಲು ಮನೆಯ ಇನ್ನಿತರ ಸದಸ್ಯರೇ ಕಾರಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಬಿಗ್‌ಬಾಸ್ ಮೂಲಗಳು ಇದನ್ನು ನಿರಾಕರಿಸಿವೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರತಾಪ್ ತಂದೆ ಮರಿಮಾದಯ್ಯ, ‘ಮಗನಿಗೆ ಫುಡ್ ಪಾಯಿಸನ್ ಆಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ರಾಂತಿ ಬಳಿಕ ಮತ್ತೆ ಬಿಗ್‌ಬಾಸ್ ಮನೆಗೆ ವಾಪಾಸ್ ಹೋಗುತ್ತಾರೆ’ ಎಂದು ತಿಳಿಸಿದ್ದಾರೆ.

Exit mobile version