Site icon PowerTV

ಒಂದೇ ದಿನ ನಾಲ್ವರು ಸಾವು : 298 ಮಂದಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಅಟ್ಟಹಾಸ ಮೆರೆದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು 298 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು ಒಟ್ಟು 7,791 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 298 ಮಂದಿಯಲ್ಲಿ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದಲ್ಲಿ 172 ಮಂದಿಯಲ್ಲಿ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದು 229 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

1,240 ಸಕ್ರೀಯ ಪ್ರಕರಣ

ರಾಜ್ಯದಲ್ಲಿ ಒಟ್ಟು 1,240 ಸಕ್ರೀಯ ಕೇಸ್‍ಗಳಿದ್ದು, 1,168 ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. 72 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 9 ಮಂದಿ ಐಸಿಯುನಲ್ಲಿದ್ದರೆ, ಮೂವರು ಐಸಿಯು ಜೊತೆ ವೆಂಟಿಲೇಟರ್ ಸಪೋರ್ಟ್‍ನಲ್ಲಿದ್ದಾರೆ. ಇನ್ನು 51 ಮಂದಿ ಜನರಲ್ ಬೆಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಶೇ. 3.82ರಷ್ಟಿದೆ.

Exit mobile version