Site icon PowerTV

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಗೊಂಡ ವೈ.ಎಸ್​ ಶರ್ಮಿಳಾ!

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗು ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು (ಜ.4) ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡು ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು. ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ವೈಎಸ್‌ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಾಗುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ’ ಎಂದು ಹೇಳಿದರು.

ಇದನ್ನೂ ಓದಿ: ಹುಟ್ಟಿದ ಮಾರನೇ ದಿನವೇ ಗಂಡು ಮಗು ಮಾರಾಟ!

ವೈ.ಎಸ್ ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಹಾಗೂ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶರ್ಮಿಳಾ ಬೆಂಬಲ ನೀಡಿದ್ದರು.

Exit mobile version