Site icon PowerTV

ಮನೆಗೆ ನುಗ್ಗಿ ಕತ್ತು ಹಿಸುಕಿ ಗೃಹಿಣಿ ಕೊಲೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮನೆಗೆ ನುಗ್ಗಿ ಕತ್ತು ಹಿಸುಕಿ ಗೃಹಿಣಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಹೌದು,ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಶಕ್ತಿ ಬಡಾವಣೆಯ ಗಂಗಾ ಬ್ಲಾಕ್‌ನಲ್ಲಿ ಮನೆಯೊಂದಕ್ಕೆ ಗುರುವಾರ ಮಧ್ಯಾಹ್ನ ದುಷ್ಕರ್ಮಿಗಳು ನುಗ್ಗಿ,ಕೊಲೆ ಮಾಡಿ ಪರಾರಿಯಾಗಿದ್ದಾರೆ.

ನೀಲಂ (30) ಕೊಲೆಯಾದವರು. ‘ನೀಲಂ ಅವರ ಪತಿ ಹಾರ್ಡ್‌ ವೇರ್ ಶಾಪ್‌ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಎಂದಿನಂತೆ ಗುರುವಾರ ಕೆಲಸಕ್ಕೆ ತೆರಳಿದ್ದರು. ಮಕ್ಕಳು ಶಾಲೆಗೆ ತೆರಳಿದ್ದರು. ಮನೆಯಲ್ಲಿ ನೀಲಂ ಒಂಟಿಯಾಗಿದ್ದರು. ಆಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ‘ಸ್ನಾರ್ಕ್ಲಿಂಗ್’ : ಫೋಟೋಸ್‌ ನೋಡಿ

ಮಕ್ಕಳು ಶಾಲೆ ಮುಗಿಸಿ ಸಂಜೆ ಮನೆಗೆ ಬಂದು ನೋಡಿದಾಗ ಕೊಲೆ ನಡೆದಿರುವುದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು. ‘ಮನೆಯ ಹಾಲ್‌ಗೆ ಬಂದು ಕೊಲೆ ಮಾಡಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿಲ್ಲ. ಹೀಗಾಗಿ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ. ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

 

 

 

Exit mobile version