Tuesday, August 26, 2025
Google search engine
HomeUncategorizedಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ : ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರ ಧರಣಿ

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ : ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರ ಧರಣಿ

ಬೇಲೂರು: ಕಾಡಾನೆಯ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮತ್ತಾವರ ಗ್ರಾಮದ ಬಳಿ ನಡೆದಿದೆ. 

ವಸಂತ (43) ಮೃತಪಟ್ಟ ವ್ಯಕ್ತಿ, ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ವಸಂತ ಅವರ ಮೇಲೆ ಒಂಟಿ ಆನೆಯೊಂದು ಏಕಾಏಕಿ ದಾಳಿ ಮಾಡಿದೆ.

ಸೊಂಡಿಲಿನಿಂದ ತಳ್ಳಿ, ತುಳಿದಿದೆ. ಇದರಿಂದ ವಸಂತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಿಕ್ಕೋಡು ಭಾಗದಲ್ಲಿ ಕಾಡಾನೆಗಳು ಹಿಂಡಾಗಿ ಓಡಾಡುತ್ತಿದ್ದು, ಅದರಲ್ಲಿನ ಒಂದು ಆನೆ ಮತ್ತಾವರದ ಬಳಿ ಬಂದು ದಾಳಿ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುವನಿಧಿ ಯೋಜನೆಗೆ ಈವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಎಷ್ಟು ಗೊತ್ತಾ?

ನಿರಂತರವಾಗಿ ಆನೆ ದಾಳಿಗಳಿಗೆ ಜನರು ಬಲಿಯಾಗುತ್ತಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ವರೆಗೆ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡಲ್ಲ ಎಂದು ಜನರು ಧರಣಿ ಆರಂಭಿಸಿದ್ದಾರೆ. ನಿಮ್ಮ ಪರಿಹಾರ ಬೇಡ ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ಥಳಕ್ಕೆ ಅರಣ್ಯ ಸಚಿವರು, ಉಸ್ತುವಾರಿ ಸಚಿವರು ಬರಲೇ ಬೇಕು  ಆನೆಗಳನ್ನು ಸ್ಥಳಾಂತರ ಮಾಡದೇ ಇದ್ದರೆ, ನಾವೇ ಇಲ್ಲಿಂದ ಜಾಗ ಖಾಲಿ ಮಾಡುತ್ತೇವೆ ಎಂದು ಜನ ಪಟ್ಟು ಹಿಡದಿದ್ದಾರೆ.

 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments