Site icon PowerTV

ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ

ಮೈಸೂರು : ಅಕ್ಷರ ಕಲಿಸಬೇಕಾದ ಗುರುವೇ ಮಕ್ಕಳ ಮೇಲೆ ಕಾಮುಕ ದೃಷ್ಟಿ ಬೀರಿರುವ ಅಮಾನವೀಯ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.

ನಂಜನಗೂಡು ತಾಲೂಕಿನ ದಾಸನೂರು ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್ ಎಂಬಾತನೇ ಈ ಕೃತ್ಯ ಎಸೆಗಿರುವ ವ್ಯಕ್ತಿ. ಈತ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಿಕ್ಷಕ ಪ್ರಕಾಶ್ ತಮಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪೋಷಕರು ದೂರು ನೀಡಿದ್ದಾರೆ. ಶಾಲೆಗೆ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕನನ್ನು ಅಮಾನತು ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ. ಇನ್ನು ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆಯನ್ನ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ನೀಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮೈ ಕೈಗಳನ್ನು ಮುಟ್ಟುತ್ತಾರೆ ಸರ್..!

ನಮ್ಮದು ಬಡ ಕುಟುಂಬ. ತಮ್ಮ ಮಕ್ಕಳನ್ನು ಸರ್ಕಾರಿ ಪ್ರಾಥಮಿಕ ಶಾಲೆಗೆ ಸೇರಿಸಿದ್ದೇವೆ. ಆದರೆ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪ್ರಕಾಶ್ ನಮ್ಮ ಹೆಣ್ಣ ಮಕ್ಕಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಮೈ ಕೈಗಳನ್ನು ಮುಟ್ಟುವುದು, ಎಳೆದಾಡುವ ಮೂಲಕ ಲೈಂಕಿಗ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಿಕ್ಷಣಾಧಿಕಾರಿಗೆ ಮನವಿ ಮಾಡಿದ್ದಾರೆ.

Exit mobile version