Site icon PowerTV

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಇಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉಳಿದಂತೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಸೇರಿಂದ ಇನ್ನಿತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೆ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version