Site icon PowerTV

ಇಸ್ರೋದ ಮತ್ತೊಂದು ಸಾಧನೆ: ಕಕ್ಷೆ ಸೇರಿದ ಇಸ್ರೋದ ಆದಿತ್ಯ L1: ಪ್ರಧಾನಿ ಮೋದಿ ಪ್ರಶಂಸೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್, ಆದಿತ್ಯ ಎಲ್‌1 ನೌಕೆಯು ಇಂದು ಅಂತಿಮ ಕಕ್ಷೆಯನ್ನು ಸೇರಿದೆ.

ಬಾಹ್ಯಾಕಾಶ ನೌಕೆಯು ಸೂರ್ಯನ ಲ್ಯಾಗ್ರೇಂಜ್‌ ಪಾಯಿಂಟ್‌ ಸೇರಿದೆ. ಅಂತಿಮ ಹಂತದ ಕಕ್ಷೆ ಬದಲಾವಣೆಯಾದರೆ ಇಸ್ರೋ ಮಹತ್ವದ ಮೈಲುಗಲ್ಲು ಮುಟ್ಟಿದಂತಾಗಿದೆ. ಸೂರ್ಯನ ವಿವರವಾದ ಅಧ್ಯಯನಕ್ಕಾಗಿ ಆದಿತ್ಯ ಎಲ್ -1 7 ವಿಭಿನ್ನ ಪೇಲೋಡ್‌ಗಳನ್ನು ಹೊಂದಿದೆ. ಅವುಗಳ ಪೈಕಿ ನಾಲ್ಕು ಸೂರ್ಯನ ಬೆಳಕನ್ನು ಪರಿಶೀಲಿಸಲಿವೆ. ಇತರ ಮೂರು ಪ್ಲಾಸ್ಮಾ ಮತ್ತು ಕಾಂತೀಯ ಕ್ಷೇತ್ರಗಳ ಇನ್-C2 ನಿಯತಾಂಕಗಳನ್ನು ಅಳೆಯಲಿವೆ.

ಇದನ್ನೂ ಓದಿ: ರೇಷ್ಮೆ ಭವನ ನಿರ್ಮಾಣಕ್ಕೆ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮದ ಹೂಡಿಕೆ!

ಈ ಉಪಕರಣಗಳು ಸೌರ ಜ್ವಾಲೆಗಳು ಮತ್ತು ಕರೋನಲ್ ಮಾಸ್ ಎಜೆಕ್ಷನ್‌ಗಳಂತಹ ಸೌರ ಚಟುವಟಿಕೆಗಳ ಡೇಟಾವನ್ನು ಒದಗಿಸಲಿವೆ ಎಂದು ಇಸ್ರೋ ಹೇಳಿದೆ.

ಇಸ್ರೋ ಈ ಸಾಧನೆಯ ಕುರಿತು ತನ್ನ ಎಕ್ಸ್​ ಖಾತೆಯಲ್ಲಿ ಆದಿತ್ಯ ಎಲ್​-1 ಅನ್ನು ಯಾವುದೇ ಅಡೆತಡೆ ಇಲ್ಲದೇ ಕಕ್ಷೆ ಸೇರಿದೆ ಎಂದು ಪೋಸ್ಟ್​ ಮಾಡಿದೆ.

ಇನ್ನೂ, ISRO ದ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿದ್ದು, ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಆದಿತ್ಯ ಎಲ್​-1 ತನ್ನ ಕಕ್ಷೆ ಸೇರುವ ಮೂಲಕ ಭಾರತ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ ಎಂದು ಹೊಗಳಿದ್ದಾರೆ.

Exit mobile version