Site icon PowerTV

ಏನೇ ಸಮಸ್ಯೆ ಬಂದ್ರು ಕುಗ್ಗಬೇಡ ಬೆನ್ನ ಹಿಂದೆ ನಾನಿದ್ದೇನೆ ಮುನ್ನುಗ್ಗು ಎಂದು ರಿಷಬ್ ಶೆಟ್ಟಿಗೆ ದೈವದ ಅಭಯ!

ಬೆಂಗಳೂರು: ರಿಷಬ್​ ಶೆಟ್ಟಿ ಅಭಿನಯದ ಕಾಂತಾರ 2 ಚಿತ್ರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತ್ತು. ಈಗಾಗಲೇ ʻಕಾಂತಾರʼ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದೀಗ ರಿಷಬ್‌ ಅವರು ದೈವ ದರ್ಶನವನ್ನು ಪಡೆದಿದ್ದಾರೆ. 

ಸ್ವಯಂಪ್ರೇರಿತವಾಗಿ ದೈವದ ಅಭಯ ಪಡೆಯಲು ಆಗಮಿಸಿದ ರಿಷಬ್ ಶೆಟ್ಟಿಗೆ, ಧೈರ್ಯ ಕಳೆದುಕೊಳ್ಳದಂತೆ ದೈವದ ಸೂಚನೆ ಸಿಕ್ಕಿದೆ. ಏನೇ ಸಮಸ್ಯೆ ಎದುರಾದರೂ ಕುಗ್ಗಬೇಡ ಎಂದು ದೈವ ಸೂಚನೆ ನೀಡಿದೆ. ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ದೈವ ಆಶೀರ್ವದಿಸಿದೆ.

ಈಗಾಗಲೇ ರಿಲೀಸ್ ಆಗಿರುವ ಕಾಂತಾರ ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವೀವ್ಸ್‌ ಪಡೆದಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದರು. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದರು.

ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

 

 

 

Exit mobile version