Site icon PowerTV

ರಾಮಮಂದಿರ ಉದ್ಘಾಟನೆಗೆ ಅಂತರಾಷ್ಟ್ರೀಯ ಬಾಣಸಿಗನಿಂದ 7 ಸಾವಿರ ಕೆಜಿ ರಾಮಹಲ್ವಾ!

ಉತ್ತರಪ್ರದೇಶ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಆಗಮಿಸುವ ಸಾವಿರಾರು ಗಣ್ಯರಿಗೆ ಸಕಲ ವ್ಯವಸ್ಥೆ, ಭದ್ರತೆ ಸೇರಿ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಇನ್ನು, ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ ತಯಾರಿಸಲಾಗುತ್ತದೆ. ವಿಶೇಷ ಪ್ರಸಾದವನ್ನು ನಾಗ್ಪುರ ಮೂಲದ, ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ ವಿಷ್ಣು ಮನೋಹರ್‌ ಅವರು ತಯಾರಿಸಲಿದ್ದಾರೆ.

ಇದನ್ನೂ ಓದಿ: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶವಿಲ್ಲ: ವಿವಾದ ಸೃಸ್ಟಿಸಿದ ಬ್ಯಾನರ್​!

ವಿಷ್ಣು ಮನೋಹರ್‌ ಅವರು ರಾಮಮಂದಿರ ಉದ್ಘಾಟನೆಯ ದಿನ ಸುಮಾರು 7 ಸಾವಿರ ಕೆ.ಜಿ ರಾಮ ಹಲ್ವಾ ತಯಾರಿಸಲಿದ್ದಾರೆ. ಇದಕ್ಕಾಗಿ ಅವರು 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ ತಯಾರಿಸಿದ್ದಾರೆ. “900 ಕೆಜಿ ರವೆ, 1 ಸಾವಿರ ಕೆಜಿ ತುಪ್ಪ, ಸಾವಿರ ಕೆಜಿ ಸಕ್ಕರೆ, 2 ಸಾವಿರ ಲೀಟರ್‌ ಹಾಲು, 2,500 ಲೀಟರ್‌ ನೀರು, 300 ಕೆಜಿ ಡ್ರೈ ಫ್ರೂಟ್ಸ್‌, 75 ಕೆಜಿ ಏಲಕ್ಕಿ ಪೌಡರ್‌ ಬಳಸಿಕೊಂಡು ವಿಶೇಷ ರಾಮ ಹಲ್ವಾ ತಯಾರಿಸಲಾಗುವುದು” ಎಂದು ವಿಷ್ಣು ಮನೋಹರ್‌ ತಿಳಿಸಿದ್ದಾರೆ.

Exit mobile version