Site icon PowerTV

ನಿಂಬೆಹಣ್ಣು,ಹಸಿಮೆಣಸಿನಕಾಯಿ ಹಾರ ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ನಗರದ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು,ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ.

ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್‌ ಮಾಡಿಕೊಂಡಿರಬೇಕು ಎಂಬ ಶಂಕೆ ಇದೆ.

ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡ ಗೆ ಜಾಮೀನು ಸಿಕ್ಕಿದರೂ ತಪ್ಪದ ಸಂಕಷ್ಟ!

ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ.ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Exit mobile version