Site icon PowerTV

ಬಿ.ಕೆ. ಹರಿಪ್ರಸಾದ್ ವಿರುದ್ಧ ಪುನೀತ್​ ಕೆರೆಹಳ್ಳಿ ದೂರು! ಕಾಂಗ್ರೆಸ್​ ನಿಂದ ಪ್ರತಿ ದೂರು

ಬೆಂಗಳೂರು: ಹಿಂದು ಕಾರ್ಯಕರ್ತ ರಾಷ್ಟ್ರ ರಕ್ಷಣಾ ಪಡೆಯ ಪುನೀತ್​ ಕೆರೆಹಳ್ಳಿ ವಿಧಾನ ಪರಿಷತ್​ ಸದಸ್ಯ ಬಿ.ಕೆ ಹರಿಪ್ರಸಾದ್​ ವಿರುದ್ದ ತಮ್ಮ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿಯನ್ನು ಬಿಜೆಪಿಯವರು ದೊಂಬಿ, ಗಲಾಟೆ ಮಾಡುವುದಕ್ಕೆ ಬಳಸಿಕೊಳ್ಳುತ್ತಾರೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಅಲ್ಲದೆ, ಪುನೀತ್ ಕೆರೆಹಳ್ಳಿ ನಂಬರ್‌ನಲ್ಲಿ ನಕಲಿ ಸಂದೇಶ ಹರಿಬಿಡಲಾಗಿದೆ ಎಂದು ಸಹ ದೂರು ನೀಡಲಾಗಿದೆ.

ಇದನ್ನೂ ಓದಿ: BMTC ಮತ್ತು KSRTC ಬಸ್​ ಕಂಡಕ್ಟರ್​ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಇಲಾಖೆ!

ಈ ಹಿನ್ನೆಲೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ ಕ್ರಮ ಜರಗಿಸಬೇಕು. ಅವರು ಈಗ ಮಾಡಿರುವ ಕೆಲಸದಿಂದ ರಾಜ್ಯದ ಬೇರೆ ಬೇರೆ ಕಡೆಯಿಂದ ಮುಸ್ಲಿಂಮರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ, ಪುನೀತ್ ಕೆರೆಹಳ್ಳಿ ದೂರು ದಾಖಲಿಸಿದ ಬೆನ್ನಲ್ಲೇ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ.

Exit mobile version