Site icon PowerTV

ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಕೊಟ್ಟ ಸರ್ಕಾರ : ಆರ್ ಅಶೋಕ್ ಟೀಕೆ

ಬೆಂಗಳೂರು: ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದಿರುವ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಪ್ರಕರಣ ದಾಖಲು 
ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.
Exit mobile version