Site icon PowerTV

ಯಶ್ ಅಭಿಮಾನಿಗಳ ಸಾವು : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ : ಸಿದ್ದರಾಮಯ್ಯ

ಬೆಂಗಳೂರು : ಯಶ್ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮೂವರು ಅಭಿಮಾನಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ಘೋಷಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು ಎಂದು ಹೇಳಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Exit mobile version